ದೆಹಲಿ : ಕೇರಳ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ನಾಯಕ ಪ್ರಕಾಶ್ ಜಾವ್ಡೇಕರ್ ಅವರು ಪದ್ಮಜಾ ವೇಣುಗೋಪಾಲ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇದಾದ ಬಳಿಕ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೇರಳ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಪದ್ಮಜಾ ವೇಣುಗೋಪಾಲ್ ಅವರು ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.