ಬೆಂಗಳೂರು: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ
ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ.
ಈ ಹಿಂದೆ ಚಕ್ರವರ್ತಿ ಸೂಲಿಬೆಲೆಯವರು ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಕಾಲಕ್ಕೆ ಬಿಜೆಪಿ ಪರವಾಗಿ ಇಡೀ ರಾಜ್ಯಾದ್ಯಂತ ಸುತ್ತಿ ಯುವಕರನ್ನು ಸಂಘಟಿಸಿದವರು. ಜನರನ್ನು ಸೆಳೆಯುವ ಸಾಮರ್ಥ್ಯ ಹೊಂದಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ಹಿಂದೆಯೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಈ ಬಾರಿ ಅವರಿಗೆ ಬಹುತೇಕ ಟಿಕೆಟ್ ನೀಡಬಹುದು ಎಂಬ ವಾತಾವರಣ ಕಂಡುಬಂದಿದೆ.
ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ, ಸಂಘ ಪ್ರಚಾರಕ ಗೋಪಾಲ್ ಜಿ ಸೇರಿದಂತೆ ಇನ್ನು ಕೆಲವರ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕೇಳಿ ಬರುತ್ತಿದ್ದು ಈ ನಡುವೆ ಚಕ್ರವರ್ತಿ ಸೂಲಿಬೆಲೆ ಅವರಿಗೆ ನೀಡಿದರೆ ಟಿಕೆಟ್ ದೊರೆತರೂ ಅಚ್ಚರಿ ಪಡಬೇಕಾಗಿಲ್ಲ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ಜೋರಾಗಿದೆ.
ಚುನಾವಣೆಯ ಕಾವು ಆರಂಭವಾಗುವ ಮೊದಲು ಅನಂತಕುಮಾರ್ಹೆಗಡೆ ಅವರು ಈ ಬಾರಿ ಸ್ಪರ್ಧಿಸುವುದಿಲ್ಲ ಎಂಬ ವದಂತಿ ಹಬ್ಬಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ದಿಢೀರನೆ ಕ್ರಿಯಾಶೀಲರಾದ ಅವರು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಅಸಕ್ತಿ ಹೊರಹಾಕಿದರು.
ಆದರೆ, ಪಕ್ಷದ ಸಂಘಟನೆಯಿಂದ ದೂರ ಇರುವುದಷ್ಟೇ ಅಲ್ಲದೆ ವಿವಾದಾಸ್ಪದ ಹೇಳಿಕೆಗಳನ್ನು ನೀಡುವ ಅನಂತಕುಮಾರ್ ಹೆಗಡೆ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವ ಬದಲು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂಬ ಕೂಗು ಬಿಜೆಪಿಯಲ್ಲಿ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಹೆಸರು ಮುನ್ನೆಲೆಗೆ ಬಂದಿದೆ.
ಈ ಹಿಂದೆಯೂ ಉತ್ತರ ಕನ್ನಡಕ್ಕೆ ಚಕ್ರವರ್ತಿ ಸೂಲಿಬೆಲೆ
ಹೆಸರು ಕೇಳಿಬಂದಿತ್ತು. ಆದರೆ, ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ನಿರಾಸಕ್ತಿ ತೋರಿಸಿದ್ದರು. ಕಳೆದ 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲೂ ಸೂಲಿಬೆಲೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಪರವಾಗಿ ಯುವ ಬ್ರಿಗೇಡ್ ಕಟ್ಟಿ ರಾಜ್ಯಾದ್ಯಂತ ವೈಯಕ್ತಿಕವಾಗಿ ಸಂಚರಿಸಿ ಪ್ರಚಾರ ಮಾಡಿದ್ದರು. ಮೋದಿ ಅವರ ನಾಯಕತ್ವ ಯಾಕೆ ಬೆಂಬಲಿಸಬೇಕು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದರು.
ಈ ಚುನಾವಣೆಯಲ್ಲೂ ಸೂಲಿಬೆಲೆ ಮೋದಿ ಪರ ತಮ್ಮ ಪ್ರಚಾರವನ್ನು ಮುಂದುವರಿಸಿದ್ದಾರೆ. ಆದರೆ, ಈ ಬಾರಿ ಚಕ್ರವರ್ತಿ ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ಇದ್ದ ತಮ್ಮ ಕಠಿಣ ನಿಲುವನ್ನು ಸಡಿಲಗೊಳಿಸಿದ್ದಾರೆ. ಹೀಗಾಗಿಯೇ ಅವರನ್ನು ಕರೆತರುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಬಲವಾದ ಚರ್ಚೆ ಆರಂಭವಾಗಿದೆ ಎನ್ನಲಾಗುತ್ತಿದೆ. ಒಟ್ಟಾರೆ, ಕೆಲವೇ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಹೊಮ್ಮಲಿದೆ.