ಮಂಡ್ಯ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ಹಾಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಕುಮಾರಸ್ವಾಮಿ ಬಹುತೇಕ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದು ಅಂತಿಮವಾಗಿದ್ದು ಅವರು ಗೆದ್ದ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದರೆ ಕೃಷಿ ಸಚಿವರಾಗುವ ವಿಶ್ವಾಸವನ್ನು ಜೆಡಿಎಸ್ ನಾಯಕರು ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶದ ಶಸ್ತ್ರಚಿಕಿತ್ಸೆಗೆ ಚೆನ್ನೈ ಆಸ್ಪತ್ರೆಗೆ ತೆರಳುವ ಮುನ್ನ ಭೇಟಿಯಾದ ಜೆಡಿಎಸ್ ನಾಯಕರ ಬಳಿ ಮಂಡ್ಯದಿಂದ ಸ್ಪರ್ಧಿಸುವ ನಿರ್ಧಾರ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮಾರ್ಚ್ 25 ಅಥವಾ 26ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಿ ತಮ್ಮ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ.