ದೆಹಲಿ : ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ? ಒಂದು ಹೆಸರು ಹೇಳಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸರಿಯಾದ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಹೀಗಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳನ್ನು ಸೆಳೆಯಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮೂದಲಿಸಿದರು.
ಬಿಜೆಪಿಯಲ್ಲಿ ಬಂಡಾಯ ಎಬ್ಬಿಸಿರುವ ಮಾಧುಸ್ವಾಮಿ,ಕರಡಿ ಸಂಗಣ್ಣ ಅವರೊಂದಿಗೆ ನಾನು ಮಾತನಾಡುವೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಳ್ಳುತ್ತೇವೆ. ಈಶ್ವರಪ್ಪರ ಬೇಜವಾಬ್ದಾರಿ ಹೇಳಿಕೆ ಸರಿಯಲ್ಲ. ಅವರ ಜೊತೆ ರಾಜ್ಯ ನಾಯಕರು ಮಾತನಾಡುತ್ತಾರೆ. ಆದರೆ, ತನ್ನ ಮಗನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ಈಶ್ವರಪ್ಪ ಸುಮ್ಮನೆ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ. ಮೋದಿ ಮತ್ತು ಅಮಿತ್ ಶಾ ಅವರ ಕೆಲಸದಿಂದ ದೇಶದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.