ಬೆಳಗಾವಿ:
ಮೊಟ್ಟ ಮೊದಲ ವಿದ್ಯುತ್ ಚಾಲಿತ ರೈಲು ಸಂಚಾರ ಬೆಂಗಳೂರಿನಿಂದ ಬೆಳಗಾವಿಗೆ ಆರಂಭವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಬೆಳಗಾವಿ-ಹುಬ್ಬಳ್ಳಿ ನಡುವೆ ರೈಲ್ವೆ ಮಾರ್ಗದ ವಿದ್ಯುದ್ದಿಕರಣ ಕಾಮಗಾರಿ ಪೂರ್ಣಗೊಂಡಿದ್ದು, ಬುಧವಾರ ಬೆಂಗಳೂರು-ಬೆಳಗಾವಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡೀಸೆಲ್‌ ಎಂಜಿನ್ ಬದಲು ಎಲೆಕ್ಟ್ರಿಕ್ ಎಂಜಿನ್ ಮೂಲಕ ಸಂಚಾರ ನಡೆಸಲಿದೆ.
ಗುರುವಾರ ಬೆಳಗಾವಿ ರೈಲು ನಿಲ್ದಾಣದಿಂದ ಮೊಟ್ಟ ಮೊದಲ ವಿದ್ಯುತ್‌ಚಾಲಿತ ರೈಲು ಪ್ರತಿದಿನ ಸಂಚಾರ ನಡೆಸಲಿದೆ. ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಕಡಿಮೆ ಸಮಯದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ತಲುಪಲು ಹಾಗೂ ಬೆಂಗಳೂರಿನಿಂದ ಬೆಳಗಾವಿಗೆ ಬರಲು ಸಮಯ ಉಳಿತಾಯದ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ.