ಬೆಂಗಳೂರು :ವಿಧಾನ ಪರಿಷತ್ನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ತೇಜಸ್ವಿನಿ ಅವರು ರಾಜೀನಾಮೆ ಸಲ್ಲಿಸಿದ್ದು, ಅಂಗೀಕಾರಗೊಂಡಿದೆ. ಸ್ವಇಚ್ಛೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನಲೆ ಅಸಮಾಧಾನಗೊಂಡಿರುವ ತೇಜಸ್ವಿನಿ, ಬಿಜೆಪಿ ತೊರೆದಿದ್ದಾರೆ ಎನ್ನಲಾಗಿದೆ. ಅವರು ಶೀಘ್ರದಲ್ಲೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ.