ಬೆಳಗಾವಿ : ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಸೇರಿದಂತೆ ಹಲವರಿಗೆ ಇದೀಗ ಪಕ್ಷದ ಹೈಕಮಾಂಡ್ ಮಹತ್ವದ ಜವಾಬ್ದಾರಿಯನ್ನು ವಹಿಸಿದೆ. ಲೋಕಸಭಾ ಚುನಾವಣೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಇದೀಗ ಅಭಯ ಪಾಟೀಲ ಅವರಿಗೆ ವಹಿಸಿಕೊಟ್ಟಿದೆ.
ಅಭಯ ಪಾಟೀಲ ಸಂಘಟನೆಯಲ್ಲಿ ಮೊದಲಿನಿಂದಲೂ ಹೆಸರು ಮಾಡಿದವರು. ಪಕ್ಷದ ಕಟ್ಟಾ ಕಾರ್ಯಕರ್ತರಾಗಿ ಹಾಗೂ ನಾಯಕರಾಗಿ ಕೆಲಸ ಮಾಡಿ ಅನುಭವ ಹೊಂದಿರುವ ಅವರು ಈ ಹಿಂದೆಯೂ ಪಕ್ಷ ವಹಿಸಿದ್ದ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ವಹಿಸಿ ಪಕ್ಷದ ವರಿಷ್ಠರ ಗಮನ ಸೆಳೆದಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳ ಲೀಡ್ ದೊರಕಿಸಿ ಕೊಡುವ ಮೂಲಕ ಈ ಹಿಂದೆ ಸಂಸದರಾಗಿದ್ದ ಸುರೇಶ ಅಂಗಡಿ ಹಾಗೂ ಹಾಲಿ ಸಂಸದೆ ಮಂಗಲಾ ಅಂಗಡಿ ಅವರ ಗೆಲುವಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರು. ತಮ್ಮ ಸ್ವಂತ ಸಾಮರ್ಥ್ಯದಿಂದ ಮತದಾರರನ್ನು ಸೆಳೆಯುವ ಸಾಮರ್ಥ್ಯ ಹೊಂದಿರುವ ಅಭಯ ಪಾಟೀಲ ಅವರ ಶಕ್ತಿಯನ್ನು ಗುರುತಿಸಿ ಇದೀಗ ಪಕ್ಷ ಮತ್ತೆ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಟ್ಟಿದೆ.
ತೆಲಂಗಾಣ ರಾಜ್ಯದ ಲೋಕಸಭಾ ಚುನಾವಣೆ ಉಸ್ತುವಾರಿಯನ್ನು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ವಹಿಸಲಾಗಿದೆ.
ಈ ಹೊಸ ಜವಾಬ್ದಾರಿ ಇದೀಗ ಅಭಯ ಪಾಟೀಲ ಅವರ ಪಾಲಿಗೆ ಅತ್ಯಂತ ದೊಡ್ಡ ಸವಾಲಾಗಿದ್ದು ಬಿಜೆಪಿ ಅಲೆ ಈ ಹೊಂದಿರುವ ನೆರೆಯ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿಗೆ ಗೆಲ್ಲಿಸಿಕೊಂಡು ಬರುವ ಮೂಲಕ ಅಭಯ ಪಾಟೀಲ ಅವರು ವರಿಷ್ಠರ ಮನ ಗೆಲ್ಲುವುದರಲ್ಲಿ ಎರಡು ಮಾತಿಲ್ಲ ಎನ್ನುವುದರಲ್ಲಿ ಯಾವ ಸಂದೇಹವು ಇಲ್ಲ. ಜೊತೆಗೆ ಈ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ಅತಿ ಹೆಚ್ಚು ಲೀಡ್ ತಂದುಕೊಟ್ಟ ಬೆಳಗಾವಿ ದಕ್ಷಿಣದಲ್ಲೂ ಈ ಸಲವು ಹೆಚ್ಚಿನ ಲೀಡ್ ತಂದು ಕೊಡಲಿ ಎನ್ನುವುದು ಬಿಜೆಪಿ ಕಾರ್ಯಕರ್ತರ ಒತ್ತಾಸೆಯಾಗಿದೆ.