ಬೆಂಗಳೂರು :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 30 ರಂದು ಪ್ರಕಟಿಸಲಿದೆ.
ಫಲಿತಾಂಶವನ್ನು ಮಾರ್ಚ್ 30 ರಂದು ಬೆಳಗ್ಗೆ 11:00 ಗಂಟೆಗೆ ಮಂಡಳಿಯ ವೆಬ್ಸೈಟ್ karresults.nic.in ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವಿಶ್ವವಿದ್ಯಾಲಯದಲ್ಲಿಯೇ ನಾಳೆ ನೋಡಬಹುದು.
ಫೆಬ್ರವರಿ 12 ರಿಂದ 27 ರವರೆಗೆ ಪ್ರಥಮ ಪಿಯುಸಿ ಪರೀಕ್ಷೆ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು. ಪೂರಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಈಗಾಗಲೇ ಮಂಡಳಿಯು ಬಿಡುಗಡೆ ಮಾಡಿದೆ ಮತ್ತು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.