ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆಯುವ
ಲೋಕಸಭಾ ಚುನಾವಣೆಗೆ ಆಯಾ ಕ್ಷೇತ್ರವಾರು ಸೀಮಿತಗೊಳಿಸಿ ಮತದಾನದ ದಿನದಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಏ.26 ಮತ್ತು ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರುವ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಸರ್ಕಾರಿ ಶಾಲೆ, ಕಾಲೇಜುಗಳನ್ನು ಒಳಗೊಂಡು ರಜೆ ಘೋಷಿಸಲಾಗಿದೆ.