ದೆಹಲಿ ; ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರು ಇಂದು ತಮ್ಮ ನಿವಾಸದಲ್ಲಿ ಭಾರತ ರತ್ನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಡ್ವಾಣಿ ಅವರಿಗೆ ಭಾರತರತ್ನ ಪ್ರದಾನ ಮಾಡಿದರು. ಶನಿವಾರ ಅವರು ಅನಾರೋಗ್ಯ ನಿಮಿತ್ತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾ ಉಪಸ್ಥಿತರಿದ್ದರು.