ಬೆಳಗಾವಿ : ನಗರ ಸೇರಿದಂತೆ ಬೆಳಗಾವಿ ಸುತ್ತಮುತ್ತಲಿನ ಪ್ರದೇಶದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಕೆಲವೆಡೆ ರಸ್ತೆಗಳಲ್ಲಿ ಮತ್ತು ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ರಸ್ತೆ ಸಂಚಾರ ಅಸ್ತವ್ಯಸ್ತೆಯಾಯಿತು.
ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿನ ತಾಪಮಾನ ದಿಂದ ಬೆಂದು ಹೋಗಿದ್ದ ಜನರು ಇಂದು ಸಂಜೆ ಸುರಿದ ಮಳೆಯ ತಂಪನೆ ಗಾಳಿಯಿಂದ ನಿಟ್ಟುಸಿರು ಬಿಡುವಂತಾಯಿತು.
ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಮಳೆರಾಯನ ಆಗಮನದಿಂದ ಬೆಳಗಾವಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಮಳೆಯ ಆರ್ಭಟದಿಂದ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ಹರಿದ ಕಾರಣ ರಸ್ತೆ ಸಂಚಾರಕ್ಕೆ ಕೆಲವೆಡೆ ಅಡಚಣೆ ಉಂಟಾಯಿತು. ಕೆಲವೆಡೆ ಹಳ್ಳಕೊಳ್ಳಗಳು ತುಂಬಿ ಹರಿದವು.