ಬೆಳಗಾವಿ : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಜಪ್ತಿ ಮಾಡಿರುವ ಘಟನೆ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.
ಇಚಲಕರಂಜಿ ಮೂಲದ ಸಂತೋಷ ಪೂಜಾರಿ ಹಾಗೂ ಜ್ಞಾನೇಶ್ವರ ಪಾಟೀಲ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು. ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.