ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ದೋಣಿ ಮುಳುಗಿದ್ದು, ಕೆಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಕಾರ್ಯಕ್ಕೆ ಜಮ್ಮು ಮತ್ತು ಕಾಶ್ಮೀರದ ವಿಪತ್ತು ನಿರ್ವಹಣೆ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ.