ಕಡೂರು : ಕಡೂರು ತಾಲೂಕಿನ ಹೇಮಗಿರಿ ಗೇಟಿನ ಬಳಿ ಸೋಮವಾರ ಬೆಳಗ್ಗೆ ಮಾಜಿ ಕಾನೂನು ಸಚಿವ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿದೆ.

ಆದರೆ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ. ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಕಡೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.