ಕಮಲಶಿಲೆ : ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶಿಲಾಮಯ ರಾಜಗೋಪುರವು ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ತಮ್ಮ ಅಮೃತ ಹಸ್ತದಿಂದ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಎ. 24 ರ ಬುಧವಾರ ಬೆಳಗ್ಗೆ ಗಂ 10 ಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ.

ಬೆಳಗ್ಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಪೂರ್ವಾಹ್ನ 9 ಕ್ಕೆ ಜಗದ್ಗುರುಗಳ ಆಗಮನ, ಪೂರ್ಣಕುಂಭ ಸ್ವಾಗತ.ಗಂ 9.30 ಕ್ಕೆ ಶ್ರೀಗಳಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬ್ರಹ್ಮಕುಂಭಾಭಿಷೇಕ.ಗಂ. 10 ಕ್ಕೆ ನೂತನ
ಶಿಲಾಮಯ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಬ್ರಹ್ಮಕುಂಭಾಭಿಷೇಕ. ಗಂ 11 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ. ಧೂಳಿಪಾದಪೂಜೆ, ಸಂಘ ಸಂಸ್ಥೆಗಳಿಂದ ಜಗದ್ಗುರುಗಳಿಗೆ ಫಲಪುಷ್ಪ ಸಮರ್ಪಣೆ. ಅನಂತರ
ಜಗದ್ಗುರುಗಳಿಂದ ಅನುಗ್ರಹ ಭಾಷಣ ಮತ್ತು ಭಕ್ತರಿಗೆ
ಫಲ ಮಂತ್ರಾಕ್ಷತೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ
ಭಾಗವಹಿಸುವ ಊರ ಪರವೂರ ಸಾವಿರಾರೂ ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಹಾಗೂ ಅನ್ನಪ್ರಸಾದಕ್ಕೆ ಅನುಕೂಲವಾಗುವಂತೆ ಸಕಲ ವ್ಯವಸ್ಥೆಗಳೊಂದಿಗೆ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಆನುವಂಶಿಕ ಆಡಳಿತ ಮೊಕ್ತೇಸರ ಎಸ್. ಸಚ್ಚಿದಾನಂದ ಚಾತ್ರ ತಿಳಿಸಿದ್ದಾರೆ