ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಗವಾಡ ಕ್ಷೇತ್ರದ ಮಮದಾಪುರದಲ್ಲಿ ಮಾತನಾಡಿದ ಅವರು, ಈಗಿನ ಯುವಕರು ಮೋದಿ ಮೋದಿ ಅಂತಾರೆ. ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ಎಂದು ನಾಲಿಗೆ ಹರಿಬಿಟ್ಟಿರುವ ರಾಜು ಕಾಗೆ, ನಾನೂ ವಿದ್ಯಾವಂತ ಇದ್ದೇನೆ. ನಾನು ಸಹ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಪ್ರಧಾನಿ ಆಗೋದೇ ಇಲ್ಲವಾ? ಮೊದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ.
ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರರು ಕಾಂಗ್ರೆಸ್ ಸರ್ಕಾರ ಬೇಕು ಎನ್ನುತ್ತಾರೆ, ಆದರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ. ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ. ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿ ಅವರು 3,000 ಕೋಟಿ ವಿಮಾನದಲ್ಲಿ ಓಡಾಡ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

ನಾನೂ ವಿದ್ಯಾವಂತ ಇದ್ದೀನಿ, ನನಗೂ ಬುದ್ಧಿ ಇದೆ, ನಾನೇನು ಕುರಿ ಅಲ್ಲ. ನಾನು ಸಹ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸ ಇದೆ ಎಂದು ಹೇಳಿದ್ದಾರೆ.