ಬೆಳಗಾವಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ಇವರ ವತಿಯಿಂದ ಮೇ 4 ರಂದು ಬೆಳಗ್ಗೆ 8 ಗಂಟೆಗೆ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿದೆ.
ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಚೆನ್ನಮ್ಮ ವೃತ್ತದಿಂದ ಗೋವಾವೇಸ್, ಶಿವಾಜಿ ಗಾರ್ಡನ್, ಪಾಟೀಲ ಗಲ್ಲಿ, ಆರ್ಟಿಓ ಸರ್ಕಲ್ವರೆಗೆ ಬುಲೆಟ್ ರ್ಯಾಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.