ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಗುರುವಾರ ನಾಳೆ (ಮೇ 9) ರಂದು ಪ್ರಕಟವಾಗಲಿದೆ.

ಬೆಳಗ್ಗೆ 9.30 ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ನಂತರ karresult.nic.in ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.