ಬೆಳಗಾವಿ:
ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಆರಂಭಗೊಂಡು ಡಿಸೆಂಬರ್ 15 ರವರೆಗೆ ವಿಧಾನ ಮಂಡಲದ ಚೇಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಜಂಟಿ ಹೋರಾಟ ನಡೆಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದ್ದು ಅಧಿವೇಶನ ಕಾವೇರುವ ಸಾಧ್ಯತೆ ಇದೆ.
ಇದೇ ಮೊದಲ ಬಾರಿಗೆ
ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಅವರು ಅಧಿವೇಶನದಲ್ಲಿ ಸರಕಾರದ ವಿರುದ್ಧ ತಮ್ಮ ವಾಕ್ ಪ್ರಹಾರ ನಡೆಸಲಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗಳು ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಮುಗಿ ಬೀಳುವ ಸಾಧ್ಯತೆ ಇದೆ.
ಒಟ್ಟಾರೆ ಸರಕಾರದ ವೈಫಲ್ಯಗಳ ವಿರುದ್ಧ ಬೆಳಗಾವಿ ಅಧಿವೇಶನ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಕಾದು ನೋಡಬೇಕು.
ಅಧಿವೇಶನ ಕಾರಣಕ್ಕಾಗಿ ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಗಮನ ಸೆಳೆಯಲಾಗಿದೆ.