ಗುಜರಾತ್ : ಶನಿವಾರ ಸಂಜೆ ಗುಜರಾತ್ನ ರಾಜ್ಕೋಟ್ನಲ್ಲಿ ಗೇಮಿಂಗ್ ಝೋನ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 27 ಜನರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.