ಹಾವೇರಿ ಶಾಸಕ ನೆಹರು ಓಲೇಕಾರ ಮೊಮ್ಮಕ್ಕಳಿಬ್ಬರ ಆತ್ಮಹತ್ಯೆ !

ಹಾವೇರಿ ಶಾಸಕ ನೆಹರು ಓಲೇಕಾರ ಮೊಮ್ಮಕ್ಕಳಿಬ್ಬರ ಆತ್ಮಹತ್ಯೆ !
Udayaprabha Latest Breaking News Download App
Udayaprabha Latest Breaking News Download App
Udayaprabha Latest Breaking News Download App

ಹಾವೇರಿ-

ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ ಅಕ್ಕನ 2 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪಟ್ಟಣದಲ್ಲಿ ಘಟನೆ ಜರುಗಿದೆ.

ಮೃತರನ್ನು ಬ್ಯಾಡಗಿಯ ವಿನಾಯಕ ನಗರ ನಿವಾಸಿಗಳಾದ ನಾಗರಾಜ ಚಂದ್ರು ಛಲವಾದಿ (16) ಹಾಗೂ ಭಾಗ್ಯಲಕ್ಷ್ಮೀ ಚಂದ್ರು ಛಲವಾದಿ (18) ಆತ್ಯಹತ್ಯೆಗೆ ಶರಣಾದ ದುರ್ದೈವಿಗಳು.

ಮೊದಲು ತಮ್ಮ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು, ನಂತರ ಅಕ್ಕನು ಮನನೊಂದು ಅದೇ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. 

ಸರಿಯಾಗಿ ಶಾಲೆಗೆ ಹೋಗು, ಅವರಿವರ ಜೊತೆ ತಿರುಗಾಡಬೇಡ ಎಂದು ಬುದ್ಧಿವಾದ ಹೇಳಿದ ತಂದೆಯ ಮಾತಿನಿಂದ ಕೋಪಗೊಂಡು ನಾಗರಾಜ ನೇಣಿಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ತಮ್ಮನ ಸಾವಿನ ಸುದ್ದಿ ತಿಳಿದು ಅಕ್ಕ ಭಾಗ್ಯಲಕ್ಷ್ಮೀ ಸಹ ಅದೇ ನೇಣಿಗೆ ಕೊರಳೊಡ್ಡಿದ್ದಾಳೆ.