| Latest Version 9.0.7 |

Crime News

ಭೀಕರ ಅಪಘಾತ: ನಾಲ್ವರು ಅಯ್ಯಪ್ಪ ಸ್ವಾಮಿ ಭಕ್ತರು ಬಲಿ

 

ತುಮಕೂರು: ಜಿಲ್ಲೆಯ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಸನಿಹ ನಿಂತಿದ್ದ ಲಾರಿಗೆ ಕ್ರೂಸರ್ ಢಿಕ್ಕಿಯಾದ ಪರಿಣಾಮ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಮೃತರು ಕೊಪ್ಪಳದ ಯಲಬುರ್ಗಾ ಮೂಲದವರು ಎಂದು ತಿಳಿದು ಬಂದಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಬರಿಮಲೆಗೆ ತೆರಳಿ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸಾಗುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ಜಖಂ ಗೊಂಡಿದೆ.

Team Udayaprabha
";