| Latest Version 9.0.7 |

Crime News

ಹುಟ್ಟುಹಬ್ಬದಂದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

 

 

ಬೆಳಗಾವಿ: ಅಜಂನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿನಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

 

ಹುಕ್ಕೇರಿ ತಾಲೂಕು ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ( 21)ಆತ್ಮಹತ್ಯೆ ಮಾಡಿಕೊಂಡವಳು. ಬಿ ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಹುಟ್ಟುಹಬ್ಬ ಇಂದೇ ಇತ್ತು. ಮೂರು ತಿಂಗಳ ಹಿಂದೆ ಪೊಲೀಸ್ ಪೇದೆಯ ಜೊತೆ ಈ ವಿದ್ಯಾರ್ಥಿನಿಯ ನಿಶ್ಚಿತಾರ್ಥ ನಡೆದಿದೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Udayaprabha
";