| Latest Version 9.0.7 |

Politics News

ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ; 15 ದಿನಗಳ ಕಾಲಾವಕಾಶ: ಡಿ.ಕೆ. ಶಿವಕುಮಾ‌ರ್

 

 

ಬೆಂಗಳೂರು: ‘ಇದೇ ಮೇ 31ರ ಒಳಗೆ ಪೂರ್ಣಗೊಂಡಿರುವ ಎಲ್ಲ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ನೀಡುವ ಅಗತ್ಯವಿಲ್ಲ, ಈ ಕುರಿತಂತೆ ಅರ್ಜಿ ಸಲ್ಲಿಸಲು ಸರ್ಕಾರಿ ಆದೇಶ ಬಂದ ದಿನದಿಂದ 15 ದಿನಗಳ ಕಾಲಾವಕಾಶ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

 

ಶನಿವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಶಿವಕುಮಾ‌ರ್ ಈ ವಿಷಯ ತಿಳಿಸಿದರು.

 

‘ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಭಾವಚಿತ್ರ ಮತ್ತು ಜಿಪಿಎಸ್ ದಾಖಲೆಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು’ ಎಂದರು.

 

‘ಗ್ರಾಮೀಣ ಭಾಗದ, ರೇಷ್ಮೆ ಸಾಕಾಣಿಕೆ ಮನೆ, ಕೊಟ್ಟಿಗೆಗಳಿಗೆ ಈ ವಿನಾಯಿತಿ ನೀಡಲಾಗಿದೆ. ಆದರೆ, ಹೊಸದಾಗಿ ನಿರ್ಮಾಣ ಮಾಡಿದರೆ ಅವಕಾಶವಿಲ್ಲ. ಈ ಕುರಿತಂತೆ ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ದಿ ಸಚಿವರ ಜೊತೆ ವಿವರವಾಗಿ ಚರ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

Team Udayaprabha
";