ಹೆಬ್ರಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ 2026ರ ಸಿ.ಎ. ಫೌಂಡೇಷನ್ ಪರೀಕ್ಷೆಯಲ್ಲಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಜಾನ್ಹವಿ ಪ್ರಭು – 223/400, ಪ್ರವೀಣ್ ಶೆಣೈ – 221/400 ಹಾಗೂ ಶ್ರೇಷ್ಠ ಶೆಟ್ಟಿ – 220/400 ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಸಿಎ ಇಂಟರ್‌ಮೀಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.


,
,


















