ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಜುಲೈ 9 ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ತಿಂಗಳ ಹಿಂದಷ್ಟೇ ಮುಖ್ಯಮಂತ್ರಿಗಳಾಗಿ ಅಧಿಕಾರಿ ವಹಿಸಿಕೊಂಡ ನಂತರ ಡಿ.ಕೆ.ಶಿವಕುಮಾರ್ ಅವರ ಚೊಚ್ಚಲ ಬೆಳಗಾವಿ ಭೇಟಿ ಇದಾಗಿದೆ. ಸುವರ್ಣ ವಿಧಾನಸೌಧದಲ್ಲಿ ಬೆಳಗ್ಗೆ 11ಕ್ಕೆ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವರು.
ಸಂಜೆ 4 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಸೌತ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಶನ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿಗಳು, ಶುಕ್ರವಾರ ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


,
,


















