| Latest Version 9.0.7 |

State News

ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಳಗಾವಿ :

ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಮತ್ತು ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯೆಂದು ಘೋಷಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ ಮಾತನಾಡಿದರು. ಪ್ರತಿಭಟನಾಕಾರರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಘೋಷಣೆಯುಳ್ಳ ಬಿತ್ತಿ ಚಿತ್ರಗಳನ್ನು ಪ್ರದರ್ಶಿಸಿದರು. ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಶಾಸಕ ವಿಠ್ಠಲ ಹಲಗೇಕರ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಅರವಿಂದ ಪಾಟೀಲ, ಪ್ರಮುಖರಾದ ಕಲ್ಲಪ್ಪ ಶಹಾಪುರಕರ,ಈರಣ್ಣ ವಾರದ,ಶಂಕರ ಹುರಕಡ್ಲಿ, ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ,ಈರಯ್ಯ ಖೋತ, ರಾಜಶೇಖರ ಡೋಣಿ, ರೈತರು, ಪ್ರಮುಖ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Team Udayaprabha
";