| Latest Version 9.0.7 |

State News

ನ್ಯಾನೋ ಜಾಥಾ-2026′ ಕಾರ್ಯಕ್ರಮ

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಮತ್ತು ಬೆಂಗಳೂರು ಇಂಡಿಯಾ ನ್ಯಾನೋ, ಸೆಂಟರ್ ಫಾರ್ ನ್ಯಾನೋ ಆ್ಯಂಡ್ ಸಾಫ್ಟ್ ಮ್ಯಾಟರ್ ಸೈನ್ಸಸ್ ಹಾಗೂ ಕೆಎಸ್‌ಟಿಇಪಿಎಸ್‌ ಸಹಯೋಗದಲ್ಲಿ “ನ್ಯಾನೋ ಜಾಥಾ-2026” ಕಾರ್ಯಕ್ರಮವನ್ನು ಜು. 21 ಮಂಗಳವಾರ ಬೆಳಗ್ಗೆ 10.30ಕ್ಕೆ ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ ಉದ್ಘಾಟಿಸಲಿದ್ದಾರೆ.
ಐಐಟಿ ಧಾರವಾಡದ ಡೀನ್ ಹಾಗೂ ಪ್ರಾಧ್ಯಾಪಕ ಪ್ರೊ. ಎಸ್. ಎಂ. ಶಿವಪ್ರಸಾದ್ ಹಾಗೂ ಬೆಂಗಳೂರಿನ ಸೆಂಟರ್ ಫಾರ್ ನ್ಯಾನೋ ಆ್ಯಂಡ್ ಸಾಫ್ಟ್ ಮ್ಯಾಟರ್ ಸೈನ್ಸಸ್ ಸಂಸ್ಥೆಯ ವಿಜ್ಞಾನಿ ಪ್ರೊ. ಎಸ್. ಕೃಷ್ಣ ಪ್ರಸಾದ್ ಅವರು ನ್ಯಾನೋ ವಿಜ್ಞಾನದ ವಿವಿಧ ಆಯಾಮಗಳು, ಸಂಶೋಧನಾ ಅವಕಾಶಗಳು ಹಾಗೂ ತಂತ್ರಜ್ಞಾನದ ಭವಿಷ್ಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕೆಆರ್‌ಸಿಯು ಕುಲಸಚಿವ ಸಂತೋಷ ಕಾಮಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್. ಸಿ. ಪಾಟೀಲ ಉಪಸ್ಥಿತರಿರುವವರು ಎಂದು ಕಾರ್ಯಕ್ರಮದ ಸಂಯೋಜಕ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಬಿ. ಜಿ. ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Team Udayaprabha
";