| Latest Version 9.0.7 |

State News

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ  

 

 

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 25ರಿಂದ ಜುಲೈ 28ರ ವರೆಗೆ ಜೋರಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರಿನ ಹವಾಮಾನ ಕೇಂದ್ರ ಜುಲೈ 25 ರಿಂದ ಜುಲೈ 28 ರವರೆಗಿನ 4 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆಯನ್ನು ಬಿಡುಗಡೆ ಮಾಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 24ರ ರಾತ್ರಿಯಿಂದ 25ರ ಬೆಳಗಿನ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಿಗೆ ಜುಲೈ 25 ರಿಂದ 28 ವರೆಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಯಲ್ಲಿಯೂ ಗುಡುಗು-ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಬೀದರ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Team Udayaprabha
";