| Latest Version 9.0.7 |

State News

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

 

 

ಮಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸುಮಾರು ಒಂದು ವಾರದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯಾದ್ಯಂತ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.

 

ನೈಋತ್ಯ ಮುಂಗಾರು ರಾಜ್ಯದಲ್ಲಿ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆ ತೀವ್ರತೆ ಮುಂದುವರಿಯುವ ಸಾಧ್ಯತೆ ಇದ್ದು ಅಪಾಯದ ಪ್ರದೇಶಗಳಲ್ಲಿ ವಾಸಿಸುವವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಐಎಂಡಿ ಸಲಹೆ ನೀಡಿದೆ. ಒಂದು ವಾರ ಕಾಲ ಕೇರಳದ ಹಲವು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರ್ನಾಕುಳಂ, ಇಡುಕ್ಕಿ, ಕಣ್ಣೂರು, ಕಾಸರಗೋಡು, ಕೋಟಾಯಂ, ಕೊಚ್ಚಿನ್‌, ಮಾಹೆ, , ಪಾಲಕ್ಕಾಡು, ತ್ರಿಶೂರ್ ಹಾಗೂ ವಯನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

Team Udayaprabha
";