| Latest Version 9.0.7 |

Education News

ಹೆಬ್ರಿ S.R ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

 

 

 

ಹೆಬ್ರಿ : ಕರ್ನಾಟಕ ಸರ್ಕಾರದ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ಅಂತರ್ಜಲ ನಿರ್ದೇಶನಾಲಯ ಉಡುಪಿ ರಜತಾದ್ರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇದರ ವತಿಯಿಂದ ಅಂತರ್ಜಲ ಸಂರಕ್ಷಣೆ ಮತ್ತು ಸದ್ಭಳಕೆ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾರ್ಕಳ ಕಾಬೆಟ್ಟು ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ 2026 ರಲ್ಲಿ ಹೆಬ್ರಿ ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ

ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

 

ವಿದ್ಯಾರ್ಥಿನಿಯನ್ನು ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್ ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.

Team Udayaprabha
";