| Latest Version 9.0.7 |

State News

ದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಸವದತ್ತಿ : ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಸ್ಥಳೀಯ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾರಿಗೆ ಬಸ್‌ ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಬಸ್ ಗೆ ಡಿಕ್ಕಿ ಹೊಡೆದು ಕೆಳಗೆ ನುಗ್ಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದ್ದು, ಮೃತರ ಕುಟುಂಬಸ್ಥರನ್ನು ಪತ್ತೆ ಮಾಡುವ ಕಾರ್ಯವೂ ನಡೆಯುತ್ತಿದೆ.

Team Udayaprabha
";