ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರು ಸೆಪ್ಟೆಂಬರ್ 23 ರಿಂದ 26 ರವರೆಗೆ ತಾಲೂಕು ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಳಗಾವಿಯ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದರು.
ಕ್ರೀಡಾಕೂಟದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮುತ್ತುರಾಜ ಹರಿಜನ ಅವರು ಉದ್ದ ಜಿಗಿತ ಸ್ಪರ್ಧೆಯಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಬಹುಮಾನವನ್ನು, ಕಮಲೇಶ್ ಎನ್. ಬುದ್ರಿ ಅವರು ಜಾವಲೀನ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಹಾಗೂ ತಾಲೂಕು ಮಟ್ಟದಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ಪ್ರಾಚಾರ್ಯ ಪ್ರೊ . ಎಸ್ ಸಿ ಪಾಟೀಲ್, ಉಪಪ್ರಾಚಾರ್ಯ ಪ್ರೊ. ಅರ್ಜುನ್ ಜಂಬಗಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕರುಣಾ ಅಮೃಸ್ಕರ್ ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


,


















