| Latest Version 9.0.7 |

State News

ಅಂತರ-ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿದ್ಯಾರ್ಥಿ ಹರೀಶ್ ವೀರಮುಖ ಅವರು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಇದರ ಅಂತರ-ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

110 ಕೆಜಿ ತೂಕದ ವಿಭಾಗದಲ್ಲಿ ಸ್ಪರ್ಧಿಸಿದ ಹರೀಶ್ ಅವರು 180 ಕೆಜಿ ಭಾರ ಎತ್ತಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಅತ್ಯುತ್ತಮ ಸಾಧನೆಯಿಂದಾಗಿ ಅವರು ಪ್ರತಿಷ್ಠಿತ ಯೂನಿವರ್ಸಿಟಿ ಬ್ಲೂ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹರೀಶ್ ಅವರು ಇತ್ತೀಚೆಗೆ ನಡೆದ ದಸರಾ ಕ್ರೀಡಾಕೂಟದಲ್ಲಿಯೂ ಭಾಗವಹಿಸಿ, ಅದೇ 110 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದರು.

ಕಾಲೇಜಿನ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ, ಉಪಪ್ರಾಚಾರ್ಯ ಪ್ರೊ. ಅರ್ಜುನ್ ಜಂಬಗಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕರುಣಾ ಅಮೃಸ್ಕರ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಯನ್ನು ಅಭಿನಂದಿಸಿದರು.

Team Udayaprabha
";