| Latest Version 9.0.7 |

Local News

ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ

 

 

ಬೆಳಗಾವಿ: ನವರಾತ್ರಿ ಹಬ್ಬದ ಪ್ರಯುಕ್ತ ರವಿವಾರ ಭೂತರಾಮನಟ್ಟಿ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೂತನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಹಾಗೂ ಚಂಡಿಕಾ ಹೋಮ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿತು.

 

ಮುಕ್ತಿ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ರಾಮಣ್ಣ ಗುಳಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.

 

ಈ ಸಂದರ್ಭದಲ್ಲಿ ಶ್ರೀ ದುರ್ಗಾದೇವಿಯ ದರ್ಶನ ಪಡೆದು ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಮ್ಮ ನಾಡಿನ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಆಚಾರ-ವಿಚಾರಗಳ ಬಗ್ಗೆ ಅಭಿಮಾನವಿರಬೇಕು. ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ-ಭಾವನೆ ಬೆಳೆಸುವುದರ ಜತೆಗೆ ಗ್ರಾಮದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಸೌಹಾರ್ದತೆಯನ್ನು ಗಟ್ಟಿಗೊಳಿಸುತ್ತವೆ. ಶ್ರೀ ದುರ್ಗಾಮಾತೆಯ ಆಶೀರ್ವಾದದಿಂದ ಗ್ರಾಮದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ, ಎಲ್ಲರ ಬದುಕಿನಲ್ಲಿ ಒಳಿತಾಗಲಿ ಎಂದು ಆಶಿಸಿದರು.

 

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ ಭೀಮಗೌಡ ಪಾಟೀಲ, ಮುಶಪ್ಪ ಪಾಟೀಲ, ಶಿವರಾಯ ಪಾಟೀಲ, ಅಶೋಕ ಪಾಟೀಲ, ಮಾರುತಿ ಪಾಟೀಲ, ಸಣ್ಣಪ್ಪ ಕಟ್ಟಬಲಿ, ಮಾರುತಿ ಚಿವಂಗೋಳ, ಬಾಲಕೃಷ್ಣ ಪಾಟೀಲ, ಸುನೀಲ್ ದುರ್ಗಯ್ಯ, ವಿಠ್ಠಲ ಪಾಟೀಲ, ಮಾರುತಿ ಪಾಟೀಲ, ಪ್ರಕಾಶ ಕಮತಿ ಸೇರಿದಂತೆ ಅನೇಕ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Team Udayaprabha
";