| Latest Version 9.0.7 |

State News

ಸಾಂಬ್ರಾ, ಉಚಗಾವಿಯಲ್ಲಿ  ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ನವರಾತ್ರಿ ಹಬ್ಬದ ಅಂಗವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಶ್ರೀ ದುರ್ಗಾಮಾತಾ ದೇವಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ನವರಾತ್ರಿ ಹಬ್ಬವು ನಾಡಿನಾದ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಲ್ಪಡುತ್ತಿದ್ದು, ದುರ್ಗಾಮಾತೆಯ ಆರಾಧನೆಯು ಎಲ್ಲರ ಬದುಕಿನಲ್ಲಿ ಸುಖ-ಸಮೃದ್ಧಿ ಮತ್ತು ಸಕಾರಾತ್ಮಕತೆ ತರಲಿ ಎಂದು ಆಶಿಸಿದರು.
ಬಳಿಕ ಉಚಗಾಂವ ಗ್ರಾಮದ ಮಾರುತಿ ಗಲ್ಲಿಯಲ್ಲಿ ನವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ಶ್ರೀ ದುರ್ಗಾಮಾತಾ ದೇವಿಯ ಪೂಜಾ ಕಾರ್ಯಕ್ರಮದಲ್ಲಿಯೂ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಭಕ್ತರೊಂದಿಗೆ ಬೆರೆತು, ನವರಾತ್ರಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ನವರಾತ್ರಿ ಹಬ್ಬವು ಶಕ್ತಿ ಸ್ವರೂಪಿಣಿ ದುರ್ಗಾಮಾತೆಯ ಆರಾಧನೆಯ ಮೂಲಕ ಧರ್ಮ, ಸತ್ಯ ಮತ್ತು ಒಳಿತಿನ ಮಹತ್ವವನ್ನು ಸಾರುತ್ತದೆ. ಇಂತಹ ಧಾರ್ಮಿಕ ಆಚರಣೆಗಳು ಜನರಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವುದರ ಜತೆಗೆ, ಪರಸ್ಪರ ಪ್ರೀತಿ, ಸೌಹಾರ್ದತೆ ಮತ್ತು ಸಾಮರಸ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ.
ಎರಡೂ ಗ್ರಾಮಗಳಲ್ಲಿ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಸ್ಥಳೀಯ ಭಕ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿ ದೇವಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು.

Team Udayaprabha
";