ಬೆಳಗಾವಿ: ಅಥಣಿ ಪಟ್ಟಣದ ಜತ್ ರಸ್ತೆಯ
‘ಬ್ರಹ್ಮಾ ಎಂಟರ್‌ಪ್ರೈಸಸ್’ ಎಂಬ ಪೀಠೋಪಕರಣ, ಬ್ರಾಂಡೆಡ್ ಬಟ್ಟೆ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮಳಿಗೆಯಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅನಾಹುತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ವಸ್ತುಗಳು ಭಸ್ಮವಾಗಿವೆ. ಮಳಿಗೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳು ಸುಟ್ಟು ಕರಕಲಾಗಿವೆ.ಭಾನುವಾರ ನಸುಕಿನ ಜಾಗ 3 ಗಂಟೆಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಇಡೀ ಮಳಿಗೆ ಆವರಿಸಿದೆ. ಮಳಿಗೆಯಲ್ಲಿದ್ದ ಸೋಫಾ, ಬೆಡ್, ಟಿ.ವಿ, ರೆಫ್ರಿಜಿರೇಟರ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು, ದುಬಾರಿ ವೆಚ್ಚದ ಬಟ್ಟೆಗಳು, ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ, ಸ್ಥಳೀಯರು ದೌಡಾಯಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ, ಬೆಂಕಿ ತೀವ್ರತೆ ಹೆಚ್ಚಿದ್ದರಿಂದ ಅವರ ಪ್ರಯತ್ನ ಫಲ ನೀಡಿಲ್ಲ.
ನಂತರ ಆಗಮಿಸಿದ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ನಂದಿಸುವುದಕ್ಕಾಗಿ ಅಗ್ನಿಶಾಮಕ ಠಾಣೆ ವಾಹನಕ್ಕೆ ಹಲವು ಬಾರಿ ನೀರು ತುಂಬಿಸಿಕೊಂಡು ಬಂದು ಕಾರ್ಯಾಚರಣೆ ಮಾಡಬೇಕಾಯಿತು. ಸತತ ಮೂರು ತಾಸು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು.
ಈ ಅನಾಹುತದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿರುವ ಸಾಧ್ಯತೆ ಇದೆ. ಆದರೆ, ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಗ್ನಿ ಅವಘಡ ಸಂಭವಿಸಿದ ಸಂದರ್ಭ ಮಳಿಗೆಯಲ್ಲಿ ಯಾರೂ ಇರಲಿಲ್ಲ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Udaya Prabha > State News > ಅಥಣಿಯಲ್ಲಿ ಅಗ್ನಿ ಅವಘಡ
ಅಥಣಿಯಲ್ಲಿ ಅಗ್ನಿ ಅವಘಡ
Team Udayaprabha18/10/2026
posted on

the authorTeam Udayaprabha
All posts byTeam Udayaprabha
Leave a reply

,

















