| Latest Version 9.0.7 |

State News

ಅಮೃತ ಭಾರತಿ: ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ

ಹೆಬ್ರಿ: ಇಲ್ಲಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜು ವತಿಯಿಂದ 2027-28ನೇ ಶೈಕ್ಷಣಿಕ ಸಾಲಿಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ ಆಯೋಜಿಸಲಾಗಿತ್ತು.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳ 600ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಪರೀಕ್ಷೆ ಬಳಿಕ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಯೋಗಾಲಯಗಳಿಗೆ ಕರೆದೊಯ್ದು ಭೌತವಿಜ್ಞಾನ, ರಸಾಯನವಿಜ್ಞಾನ, ಜೀವವಿಜ್ಞಾನ ವಿಷಯಗಳ ಪ್ರಾಯೋಗಿಕ ಪ್ರಾತ್ಯಕ್ಷಿಕೆ ತೋರಿಸಿಕೊಡಲಾಯಿತು. ಮಾಹಿತಿ ಸಭೆಯಲ್ಲಿ ಅಮೃತ ಭಾರತಿ ಟ್ರಸ್ಟ್‌ ಸ್ಥಾಪಕಾಧ್ಯಕ್ಷ ಸತೀಶ್ ಪೈ ಸಂಸ್ಥೆಯು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಮಾಡುತ್ತಿರುವ ಸೇವಾ ಕಾರ್ಯಗಳ ಬಗ್ಗೆ ತಿಳಿಸಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್‌ ಕಾಲೇಜಿನ ಶಿಸ್ತು, ಸಂಸ್ಕಾರಯುತ ಶಿಕ್ಷಣ ಹಾಸ್ಟೆಲ್‌ ಸೌಲಭ್ಯದ ಬಗ್ಗೆ ವಿವರಿಸಿದರು.

ಪ್ರಾಂಶುಪಾಲ ಪ್ರಕಾಶ್ ಜೋಗಿ ಸಂಪೂರ್ಣ ಉಚಿತ ಶಿಕ್ಷಣ ಯೋಜನೆಯ ಸದುಪಯೋಗ, ಸಂಸ್ಥೆಯ ವಿವಿಧ ವಿದ್ಯಾರ್ಥಿವೇತನದ ಅನುಕೂಲ ಪಡೆದುಕೊಳ್ಳುವಂತೆ ತಿಳಿಸಿದರು. ಮೊದಲ ಹಂತದಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2ನೇ

ಹಂತದ ಪರೀಕ್ಷೆ ನ. 1ರಂದು ನಡೆಸಲಾಗುವುದು ಎಂದು ತಿಳಿಸಿದರು.

ಅಮೃತ ಭಾರತಿ ಸಮೂಹ ಸಂಸ್ಥೆಗಳ ಮೇಲ್ವಿಚಾರಕ ವಿಜಯ ಕುಮಾ‌ರ್ ಶೆಟ್ಟಿ, ಬೋಧಕರು ಭಾಗವಹಿಸಿದ್ದರು. ಕನ್ನಡ ಉಪನ್ಯಾಸಕ ವೀಣೇಶ್ ಅಮೀನ್ ನಿರೂಪಿಸಿದರು.

Team Udayaprabha
";