ಖಾನಾಪುರ : ಖಾನಾಪುರ ತಾಲೂಕಿನ ಹಳಗಾ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡದ ಭೂಮಿಪೂಜೆಯನ್ನು ಶಾಸಕ ವಿಠ್ಠಲ ಹಲಗೇಕರ ಅವರು ಬುಧವಾರ ನೆರವೇರಿಸಿದರು.
ಈ ಅಂಗನವಾಡಿ ಕಟ್ಟಡದ ನಿರ್ಮಾಣಕ್ಕಾಗಿ ಶಾಸಕರ ನಿಧಿಯಿಂದ ₹20 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಾತಾವರಣವನ್ನು ಒದಗಿಸುವುದರ ಜೊತೆಗೆ, ಅವರ ಶೈಕ್ಷಣಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ಈ ಮುಖ್ಯ ಉದ್ದೇಶವಾಗಿದೆ.
ನೂತನ ಅಂಗನವಾಡಿ ಕಟ್ಟಡದ ನಿರ್ಮಾಣದಿಂದ ಗ್ರಾಮದ ಪುಟ್ಟ ಮಕ್ಕಳಿಗೆ ಉತ್ತಮ ಸೌಲಭ್ಯಗಳು ದೊರೆಯಲಿವೆ ಎಂಬ ವಿಶ್ವಾಸವಿದೆ ಎಂದು ಶಾಸಕ ವಿಠ್ಠಲ ಹಲಗೇಕರ ತಿಳಿಸಿದರು.


,


















