| Latest Version 9.0.7 |

National News

ಆತ್ಮಹತ್ಯೆ ಮಾಡಿಕೊಳ್ಳಲು ಕಾರನ್ನು 7 ವಾಹನಗಳಿಗೆ ಡಿಕ್ಕಿ ಹೊಡೆಸಿದ ವ್ಯಕ್ತಿ !

 

ಕೊಟ್ಟಾಯಂ : ಕೊಟ್ಟಾಯಂ ಜಿಲ್ಲೆಯ ಮುಂಡಕ್ಕಯಂನ ಚೋಟ್ಟಿ ಪ್ರದೇಶದಲ್ಲಿ ಏಳು ವಾಹನಗಳು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತವನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಉದ್ದೇಶದಿಂದ ಅತಿವೇಗದಲ್ಲಿ ಕಾರು ಚಲಾಯಿಸಿ ಅಪಘಾತ ನಡೆಸಲಾಗಿದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕುಟ್ಟಿಕ್ಕಲ್‌ನ ತೇನ್‌ಪುಳ ನಿವಾಸಿ ಶಲೋಮ್ ವಿರುದ್ಧ ಮುಂಡಕ್ಕಯಂ ಪೊಲೀಸರು ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಭಾನುವಾರ ಬೆಳಗ್ಗೆ ಸುಮಾರು 8:15ರ ವೇಳೆಗೆ ಚೋಟ್ಟಿ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಐದು ಕಾರುಗಳು, ಒಂದು ಆಟೋರಿಕ್ಷಾ ಹಾಗೂ ಒಂದು ಸ್ಕೂಟರ್ ಪರಸ್ಪರ ಡಿಕ್ಕಿಯಾಗಿವೆ. ಇಬ್ಬರು ಪಾದಚಾರಿಗಳು ಸೇರಿದಂತೆ ಒಟ್ಟು 10 ಮಂದಿ ಗಾಯಗೊಂಡಿದ್ದಾರೆ.ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವುದಾಗಿ 27 ವರ್ಷದ ಯುವಕ ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಶಲೋಮ್ ಚಲಾಯಿಸುತ್ತಿದ್ದ ಬಲೆನೊ ಕಾರನ್ನು ಮೊದಲು ಮರಕ್ಕೆ ಡಿಕ್ಕಿ ಹೊಡೆಸಿ ಅಪಘಾತಕ್ಕೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಆ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಆಟೋರಿಕ್ಷಾಕ್ಕೆ ಕಾರನ್ನು ಡಿಕ್ಕಿ ಹೊಡೆಸಿದ್ದಾಗಿ ಶಲೋಮ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಇದಾದ ಬಳಿಕ ನಿಯಂತ್ರಣ ತಪ್ಪಿದ ಕಾರು ಸೇರಿದಂತೆ ಹಲವು ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಅಪಘಾತದಲ್ಲಿ ಗಾಯಗೊಂಡಿರುವ ಶಲೋಮ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

 

ಅಪಘಾತಕ್ಕೆ ಕಾರಣನಾದ ಆರೋಪಿಯನ್ನು ಕುಟ್ಟಿಕ್ಕಲ್ ಪುತ್ತೂರು ನಿವಾಸಿ ಶರೋನಿನ್ ಫಿಲಿಪ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಪಘಾತದಲ್ಲಿ ಫಿಲಿಪ್ ಕೂಡ ಗಾಯಗೊಂಡಿದ್ದು, ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಭಾನುವಾರ ಬೆಳಗ್ಗೆ ಸುಮಾರು 8:15ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 183ರಲ್ಲಿ ಈ ಅಪಘಾತ ಸಂಭವಿಸಿದೆ. ಫಿಲಿಪ್ ಚಲಾಯಿಸುತ್ತಿದ್ದ ಕಾರು ಅತಿವೇಗದಲ್ಲಿ ಬಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಗೂ ನಿಂತಿದ್ದ ಹಲವು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐದು ಕಾರುಗಳು, ಒಂದು ಆಟೋರಿಕ್ಷಾ ಮತ್ತು ಒಂದು ಸ್ಕೂಟರ್ ಸೇರಿದಂತೆ ಒಟ್ಟು ಏಳು ವಾಹನಗಳು ಹಾನಿಗೊಳಗಾಗಿವೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಪೊಲೀಸರ ಪ್ರಕಾರ, ಫಿಲಿಪ್‌ನ ಕಾರು ಅತಿವೇಗದಲ್ಲಿ ಬಂದು ಆಟೋರಿಕ್ಷಾ ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಆಟೋರಿಕ್ಷಾದಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು. ಇದಲ್ಲದೆ, ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಎಂಟರ್‌ ಆಗಲು ಕಾಯುತ್ತಿದ್ದ ಮತ್ತೊಂದು ಕಾರಿಗೂ ಫಿಲಿಪ್‌ನ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುವ ಕೆಲವೇ ಕ್ಷಣಗಳ ಹಿಂದಿನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾರು ಎಷ್ಟು ವೇಗವಾಗಿ ಚಲಿಸುತ್ತಿತ್ತು ಎಂಬುದು ದೃಶ್ಯಾವಳಿಯಿಂದ ತಿಳಿದುಬಂದಿದೆ.

 

ಹಿಂಬದಿಯಿಂದ ಕಾರು ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ರಸ್ತೆಯಲ್ಲೇ ಪಲ್ಟಿಯಾಗಿದೆ. ಇದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವರ್ಷದ ಬಾಲಕಿ ಅವನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯ ತಂದೆ 35 ವರ್ಷದ ಶ್ಯಾಂಜಿತ್, ತಾಯಿ 30 ವರ್ಷದ ಶಾಲಿನಿ ಹಾಗೂ ಒಂಬತ್ತು ವರ್ಷದ ಸಹೋದರ ಅದ್ವೈತ್ ಕೂಡ ಗಾಯಗೊಂಡಿದ್ದಾರೆ. ಅಪಘಾತದ ಕುರಿತು ಮಾತನಾಡಿರುವ ಶ್ಯಾಂಜಿತ್, ಹಿಂದಿನಿಂದ ವಾಹನ ಡಿಕ್ಕಿ ಹೊಡೆದ ಕ್ಷಣ ಮಾತ್ರ ತಮಗೆ ನೆನಪಿದೆ ಎಂದು ತಿಳಿಸಿದ್ದಾರೆ.

ಕಾರಿನೊಳಗೆ ಸಿಲುಕಿದ್ದ ಚಾಲಕನ ರಕ್ಷಣೆ

ಸರಣಿ ಅಪಘಾತದ ಬಳಿಕ ಫಿಲಿಪ್ ಚಲಾಯಿಸುತ್ತಿದ್ದ ಕಾರು ತೀವ್ರವಾಗಿ ಜಖಂಗೊಂಡಿದ್ದು, ಆತ ಕಾರಿನೊಳಗೆ ಸಿಲುಕಿಕೊಂಡಿದ್ದ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆತನನ್ನು ಕಾರಿನಿಂದ ಹೊರತೆಗೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಇತರರನ್ನು 65 ವರ್ಷದ ಅನ್ಸಾರಿ, 31 ವರ್ಷದ ಸಾಹಿಲ್, 65 ವರ್ಷದ ಪಿ.ವಿ. ರಾಜನ್, 12 ವರ್ಷದ ರೇವಂದ್, 11 ವರ್ಷದ ಶ್ರೇವಂದ್ ಹಾಗೂ 71 ವರ್ಷದ ರಾಜು ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಮೂವರು ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಕಾರನ್ನು ಅತಿವೇಗದಲ್ಲಿ ಚಲಾಯಿಸಿದ್ದಾಗಿ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Team Udayaprabha
";