ಬೆಂಗಳೂರು: ರಾಜ್ಯ ಸರ್ಕಾರ ನಾಡಿನ ಗೃಹಲಕ್ಷ್ಮಿಯರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತಿನ ಒಟ್ಟು 7, 405.86 ಕೋಟಿ ರೂ. ಹಣವನ್ನು ಬಿಡುಗಡೆಗೊಳಿಸಿದೆ.
ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೂ 33 ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಈಗ 34ನೇ ಕಂತಿನ 2, 500 ಕೋಟಿ ರೂ., 35ನೇ ಕಂತಿನ 2,452.93 ಕೋಟಿ ರೂ. ಮತ್ತು 36ನೇ ಕಂತಿನ 2,452.93 ಕೋಟಿ ರೂ. ಹಣವನ್ನು ಒಮ್ಮೆಲೆ ಬಿಡುಗಡೆ ಆಗಿದೆ. ಇದರಿಂದ ಅಕ್ಟೋಬರ್‌ವರೆಗೆ ರಾಜ್ಯದ 1.24 ಕೋಟಿ ಮಹಿಳೆಯರಿಗೆ ಒಟ್ಟು 86,838.36 ಕೋಟಿ ರೂ. ಗೃಹಲಕ್ಷ್ಮಿ ಹಣ ತಲುಪಲಿದೆ. ಈ ಮೂಲಕ ಪ್ರತಿ ಫಲಾನುಭವಿಗೆ 72,000 ರೂ. ತಲುಪಿದಂತಾಗಲಿದೆ.
ರಾಜ್ಯದಲ್ಲಿ ಬರಗಾಲದಲ್ಲಿ ನಡುವೆ ದೀಪಾವಳಿ ಹಬ್ಬ ಎದುರಾಗಿದ್ದು ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.


,


















