| Latest Version 9.0.7 |

State News

ಅತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಕಚ್ಚಿದ ಮೊಸಳೆ; ಕೂಗಾಟ ಕೇಳಿ ರಕ್ಷಣೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಉಡುಪಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಬುಧವಾರ ರಾತ್ರಿ ಮೊಸಳೆಯೊಂದು ಕಚ್ಚಿ ಗಾಯಗೊಳಿಸಿದೆ. ಮಹಿಳೆ ಕಿರುಚಾಟ ಕೇಳಿ ಸ್ಥಳೀಯರು ಹಾಗೂ ಪೊಲೀಸರು ಸೇರಿ ಆಕೆಯನ್ನು ರಕ್ಷಣೆ ಮಾಡಿದ್ದಾರೆ.

ವೈಯಕ್ತಿಕ ಕಾರಣದಿಂದ ಬೇಸತ್ತಿದ್ದ ಮಹಿಳೆ ಬುಧವಾರ ರಾತ್ರಿ ಕುಮಾರಧಾರ ಸೇತುವೆ ಬಳಿ ನೀರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಆಕೆಗೆ ಮೊಸಳೆ ಕಚ್ಚಿ ಸಣ್ಣ ಪ್ರಮಾಣದಲ್ಲಿ ಗಾಯಗೊಳಿಸಿತ್ತು. ಆಕೆಯ ಕಿರುಚಾಟ ಕೇಳಿ ಸಮೀಪದ ವಸತಿಗೃಹವೊಂದರ ಕಾರ್ಮಿಕರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯ ಸಾರ್ವಜನಿಕರ ಸಹಕಾರದಿಂದ ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಆಕೆಯ ಮನೆಯವರೊಂದಿಗೆ ಕಳುಹಿಸಿ ಕೊಟ್ಟಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Team Udayaprabha
";