ನವದೆಹಲಿ: ಭಾರತದ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ತಮ್ಮ ಕುಟುಂಬದ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬಕ್ಕೆ ಶುಭಕೋರಿದ್ದಾರೆ.
ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಸೂರ್ಯಕುಮಾರ್ ಯಾದವ್ ಅವರು, ‘ಮೋದಿ ಅವರೊಂದಿಗಿನ ಈ ಕ್ಷಣ ನಿಜಕ್ಕೂ ಹೆಮ್ಮೆಯ ಕ್ಷಣ. ನಮ್ಮ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಎಲ್ಲರನ್ನೂ ಒಗ್ಗೂಡಿಸುವ ಮೌಲ್ಯಗಳನ್ನು ನೆನಪಿಸುವ ಸುಂದರ ಗಳಿಗೆ ಇದು. ಈ ವಿಶೇಷ ಕ್ಷಣಕ್ಕಾಗಿ ಕೃತಜ್ಞತೆ ತಿಳಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ದೀಪಾವಳಿ ಸಂಭ್ರಮದ ನಡುವೆ ರಾಮ ಮತ್ತು ಸರಯೂ ಆಗಮಿಸಿ ಹಬ್ಬದ ವಾತಾವರಣಕ್ಕೆ ಇನ್ನಷ್ಟು ಕಳೆದ ತಂದಿದೆ’ ಎಂದು ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡು ಸೂರ್ಯಕುಮಾರ್ ಯಾದವ್ ದಂಪತಿಗೆ ಶುಭಕೋರಿದ್ದಾರೆ.


,


















