ಬೆಳಗಾವಿ : ಬೆಳಗಾವಿ ಲೋಕಸಭಾ ಮತ ಕ್ಷೇತ್ರದಲ್ಲಿ ಈ ಬಾರಿ ಹಿಂದೆಂದಿಗಿಂತ ವಿಶೇಷವಾಗಿ ಲೋಕಸಭಾ ಚುನಾವಣೆ ಕಾವೇರುವ ಸಾಧ್ಯತೆ ಇದೆ.

ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯದ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸುಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತ ಎನಿಸಿದ್ದು ಹೆಬ್ಬಾಳ್ಕರ್ ಪುತ್ರ ಇದೀಗ ಇಡೀ ಲೋಕಸಭಾ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದಾರೆ. ಇಷ್ಟರಲ್ಲೇ ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದು ಈ ಸಲದ ಚುನಾವಣೆ ಭಾರಿ ಕುತೂಹಲ ಕೆರಳಿಸಿದೆ.

ಬಿಜೆಪಿ ಪಾಲಿಗೆ ಕ್ಷೇತ್ರವನ್ನು ತನ್ನ ಹಿಡಿತದಲ್ಲೇ ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ಇನ್ನೊಂದೆಡೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಪುತ್ರನನ್ನು ಗೆಲ್ಲಿಸಿಕೊಂಡು ಬರುವ ಮೂಲಕ ತಾವು ಪ್ರಭಾವಿ ನಾಯಕಿ ಎಂದು ಇಡೀ ರಾಜ್ಯಕ್ಕೆ ತೋರಿಸಿಕೊಡುವ ಹೆಬ್ಬಯಕೆಯಲ್ಲಿದ್ದಾರೆ. ಒಟ್ಟಾರೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಚುನಾವಣೆ ಹಿಂದೆಂದಿಗಿಂತ ಈ ಸಲ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.