ಮಂಗಳೂರು : ತಡೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಜೋಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ (17)ಮೃತ ಬಾಲಕ. ಜೋಕಟ್ಟೆಯ ತನ್ನ ಸಂಬಂಧಿಕರ ಮನೆಗೆ ಅತಿಥಿಯಾಗಿ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು. ಮನೆಯ ಪಕ್ಕದಲ್ಲಿ ತಡೆಗೋಡೆ ಕುಸಿದು ಈ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.