ಬೆಳಗಾವಿ :
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿಯ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿರುವ ಯುವತಿಯ ಕುಟುಂಬಸ್ಥರು, ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿಯ ವಂಟಮೂರಿ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಹಿಳೆಯನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ.

ಪ್ರಕರಣ ಇದೀಗ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ ವಿಚಾರಣೆ ನಡೆಸಿದ್ದಾರೆ.