ಮುಂಬೈ: ಮಂಗಳೂರು ಮೂಲದ ಬೆಡಗಿ ಪುಜಾ ಹೆಗ್ಡೆ ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ನಲ್ಲೂ ಬಹುಬೇಡಿಕೆಯ ನಟಿ ಎನ್ನಿಸಿಕೊಂಡಿದ್ದಾರೆ. ದಕ್ಷಿಣ ಹಾಗೂ ಹಿಂದಿ ಚಿತ್ರರಂಗದ ಪ್ರಮುಖರೊಂದಿಗೆ ನಟಿಸುವ ಮೂಲಕ ಹೆಚ್ಚು ಖ್ಯಾತಿ ಪಡೆದಿರುವ ಪೂಜಾ ಅವರಿಗೆ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಗದಿರುವುದು ಬೇಸರದ ಸಂಗತಿ. ಆದರೂ ಈ ನಟಿಗೆ ಚಿತ್ರರಂಗದಲ್ಲಿ ಡಿಮ್ಯಾಂಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗ ಸುದ್ದಿಯಾಗಿದ್ದಾರೆ.
ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂಪಾಯಿ ಬೆಲೆಬಾಳುವ ಐಷಾರಾಮಿ ಮನೆ ಖರೀದಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 4000 ಚದರ ಅಡಿ ವಿಸ್ತೀರ್ಣ ಇರುವ ಸಮುದ್ರದ ಕಡೆ ಮುಖ ಮಾಡಿರುವ ಈ ಮನೆ ತುಂಬ ಸುಂದರವಾಗಿದೆ ಎಂದು ಹೇಳಲಾಗಿದೆ. ಹೊಸ ಮನೆಯ ವಿಷಯ ತಿಳಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ನಟಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಶಾಹಿದ್ ಕಪೂರ್ ನಟನೆಯ ದೇವ ಚಿತ್ರದಲ್ಲಿ ಬ್ಯುಸಿ ಇರುವ ಪೂಜಾ ಹೆಗ್ಡೆ ಆ ಬಳಿಕ ದಕ್ಷಿಣ ಭಾರತದ ಸ್ಟಾರ್ ನಟರೊಂದಿಗಿನ ಚಿತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ನಟಿ ಪೂಜಾ ಹೆಗ್ಡೆ ಅವರಿಗೆ ಯಶಸ್ಸು ಅಷ್ಟಾಗಿ ಕೈ ಹಿಡಿದಿಲ್ಲ ಎಂದು ಹೇಳಬಹುದಾಗಿದೆ. ಏಕೆಂದರೆ ಅವರ ನಟನೆಯ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಹೆಚ್ಚು ಸದ್ದು ಮಾಡುವಲ್ಲಿ ವಿಫಲವಾಗಿದ್ದು, ನಟಿಗೆ ಅವಕಾಶಗಳಿಗೆ ಏನು ಕಡಿಮೆ ಇಲ್ಲ ಎಂದು ಹೇಳಲಾಗಿದೆ. ಇದೀಗ ನಟಿ ಪೂಜಾ ಹೆಗ್ಡೆ ವಾಣಿಜ್ಯ ನಗರಿ ಮುಂಬೈನಲ್ಲಿ ದುಬಾರಿ ಬೆಲೆಯ ಮನೆಯೊಂದನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.