Join The Telegram | Join The WhatsApp |
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಹೆಲ್ಮೆಟ್‌ನಿಂದ ಹೊಡೆದು ವ್ಯಕ್ತಿಯನ್ನು ಕೊಲೆಗೈದ ಘಟನೆ ನಡೆದಿದೆ.
ನಿವೃತ್ತ ಶಿಕ್ಷಕ ಶೇಖರಪ್ಪ ಎಂಬುವವರನ್ನು ಕೊಲೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಶೇಖರಪ್ಪ ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನೂ ಕೇವಲ ಐದು ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ನಡೆದ ಜಗಳ, ಮಾರಾಮಾರಿ ಈ ಕೊಲೆಗೆ ಕಾರಣ ಎನ್ನಲಾಗಿದೆ. ನಿವೇಶನಕ್ಕೆ ಹೋಗುವ ದಾರಿಯ ವಿಚಾರದಲ್ಲಿ ಈ ಜಗಳ ಆರಂಭವಾಗಿತ್ತು. ಗಲಾಟೆಯಲ್ಲಿ ಎರಡೂ ಕುಟುಂಬಗಳ ಹಲವರಿಗೆ ಗಾಯಗಳಾಗಿವೆ.
ಶೇಖರಪ್ಪ ಅವರ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಬಳಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಉಮೇಶ್, ಮಲ್ಲಿಕಾರ್ಜುನ, ರಾಜು ಮತ್ತು ದೇವಿಕಾ ಎಂಬವರನ್ನು ಬಂಧಿಸಿದ್ದಾರೆ.
Join The Telegram | Join The WhatsApp |