ಬೆಳಗಾವಿ : ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೋರ್ವ ತನ್ನ ವ್ಯವಸ್ಥೆಗಾಗಿ ನಿಂತಿದ್ದ ಅಟೆಂಡರನನ್ನು ಮುಖಕ್ಕೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಘಟಪ್ರಭಾದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

ಅನಾರೋಗ್ಯದಿಂದ ಬಳಲುತಿದ್ದ ವ್ಯಕ್ತಿ ರವಿವಾರ ತಡರಾತ್ರಿ ಈ ಕೃತ್ಯ ನಡೆಸಿದ್ದು, ಈ ಘಟನೆಯಿಂದ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಇನ್ನುಳಿದ ರೋಗಿಗಳು ಭಯಭೀತರಾಗಿದ್ದಾರೆ. ರೋಗಿ ಕಲ್ಲಿನಿಂದ ಹತ್ಯೆ ಮಾಡಿರುವ ದೃಶ್ಯ ಆಸ್ಪತ್ರೆಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಘಟಪ್ರಭಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆ ಆಗಿರುವ ವ್ಯಕ್ತಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯವನಾಗಿದ್ದು, ಕೊಲೆಗೆ ಹಳೆಯ ವೈಷಮ್ಯ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಹಾಗೂ ಕೊಲೆಯಾದವರು ಇಬ್ಬರು ಸಂಬಂಧಿಕರು ಎನ್ನಲಾಗಿದೆ. ಕೊಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.