ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರಾಕ್ಟರ್‌ ಮಗುಚಿ ಭೀಕರ ದುರ್ಘಟನೆ ಸೋಮವಾರ ಸುವರ್ಣ ವಿಧಾನಸೌಧ ಬಳಿ ನಡೆದಿದೆ.

ಹುಬ್ಬಳ್ಳಿಯ ಗಿರೀಶ್ ಕುಲಕರ್ಣಿ

( 24)ಮೃತಪಟ್ಟ ಯುವಕ. ಪ್ರಥಮ್ ಮತ್ತು ಇನ್ನೊಬ್ಬ ಗಿರೀಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಸ್ನೇಹಿತರು ಹುಟ್ಟು ಹಬ್ಬ ಆಚರಣೆ ಮುಗಿಸಿ ಹುಬ್ಬಳ್ಳಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ಓವರ್ ಲೋಡ್ ನಿಂದ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿ ಹೋಗುತ್ತಿದ್ದವರ ಪೈಕಿ ಒಬ್ಬ ಸ್ಥಳದಲ್ಲಿ ಮೃತಪಟ್ಟರೆ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.